BIG NEWS : ಮೂರು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ!

ವಾರ್ತಾಜಾಲ
By -
0

ಬೆಂಗಳೂರು (ಮಾ.4): ಭಾನುವಾರ ನೈಋತ್ಯ ರೈಲ್ವೆ ವಲಯದ ಮೂಲಕ ಹಾದುಹೋಗುವ ಮೂರು ವಿಭಿನ್ನ ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ವರದಿಗಳು ತಿಳಿಸಿವೆ. ರೈಲಿನ ಗಾಜಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.


ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನ ಇನ್‌ಸ್ಪೆಕ್ಟರ್ ಜನರಲ್ ಕಮ್ ಪ್ರಿನ್ಸಿಪಲ್ ಚೀಫ್ ಸೆಕ್ಯುರಿಟಿ ಕಮಿಷನರ್ ಆರ್, ರಾಮ ಶಂಕರ್ ಪ್ರಸಾದ್ ಸಿಂಗ್ ಮಾತನಾಡಿ, ಈ ಸಂಬ0ಧ ಇದುವರೆಗೂ ಯಾರೋಬ್ಬರನ್ನು ಬಂಧಿಸಿಲ್ಲ ಎಂದಿದ್ದಾರೆ.

ಭಾನುವಾರದ ಒಂದೇ ದಿನದಲ್ಲಿ ಮೂರು ಘಟನೆಗಳು ನಡೆದಿವೆ. ನಮ್ಮ ಪೊಲೀಸರು ವಿವಿಧ ಸ್ಥಳಗಳಿಗೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಎರಡು ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಸಂಭವಿಸಿರುವುದು.

ಭಾನುವಾರದ0ದು ಬೆಳಗ್ಗೆ 6.15ಕ್ಕೆ ಕೆಎಸ್‌ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ (20661) ಬೆಂಗಳೂರು ರೈಲ್ವೆ ವಿಭಾಗದ ಚಿಕ್ಕಬಾಣಾವರ ರೈಲು ನಿಲ್ದಾಣವನ್ನು ದಾಟಿದಾಗ ಮೊದಲ ಘಟನೆ ನಡೆದಿದೆ. ಕೋಚ್ ಅ6 ನ 40, 41 ಮತ್ತು 42 ಸೀಟ್‌ಗಳಲ್ಲಿರುವ ಕಿಟಕಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಎರಡನೇ ಪ್ರಕರಣ: ಭಾನುವಾರ ಮಧ್ಯಾಹ್ನ 3.20ರ ಸುಮಾರಿಗೆ ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ (20662) ಸಂಚರಿಸುತ್ತಿದ್ದ ವೇಳೆ ಸಂಭವಿಸಿದೆ. ಮೈಸೂರು ವಿಭಾಗದ ಹಾವೇರಿ ಮತ್ತು ಹರಿಹರ ರೈಲು ನಿಲ್ದಾಣದ ಸಿ 5 ಕೋಚ್‌ನ ಕಿಟಕಿ ಗಾಜುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

3ನೇ ಘಟನೆ ಮೈಸೂರು-ಎಂಜಿಆರ್ ಸೆಂಟ್ರಲ್ ವಂದೇ ಭಾರತ್ ನಲ್ಲಿ ಬೆಂಗಳೂರು ವಿಭಾಗದ ಕುಪ್ಪಂ ನಿಲ್ದಾಣದ 200 ಮೀಟರ್ ಮೊದಲು ಸಂಜೆ 4.30 ಕ್ಕೆ ಸಂಭವಿಸಿದೆ. "ಇಂಜಿನ್‌ನ ಬಲಭಾಗದಿಂದ, 40, 41 ಮತ್ತು 42 ಆಸನಗಳಿರುವ ಅ4 ಕೋಚ್‌ನಲ್ಲಿ ದುಷ್ಕರ್ಮಿಗಳು ಗಾಜಿನ ಫಲಕಗಳನ್ನು ಹಾನಿಗೊಳಿಸಿದ್ದಾರೆ" ಎಂದು ಸಿಂಗ್ ತಿಳಿಸಿದ್ದಾರೆ.

ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದರು. ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಪ್ರಕರಣಗಳಲ್ಲಿ ಈಗಾಗಲೇ ಜುಲೈನಿಂದ ಡಿಸೆಂಬರ್ ವರೆಗೆ 45 ಮಂದಿಯನ್ನು ಬಂಧಿಸಲಾಗಿದೆ ಎಂದರು.

ನಾವು ಅವರುಗಳನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಸ್ತಾಂತರಿಸುತ್ತೇವೆ ಮತ್ತು ಅವರು ತೆಗೆದುಕೊಳ್ಳಬೇಕಾದ ಕ್ರಮವನ್ನು ನಿರ್ಧರಿಸುತ್ತಾರೆ. ವಯಸ್ಕರ ವಿಷಯದಲ್ಲಿ, ನಾವು ಅವರನ್ನು ರೈಲ್ವೆ ಕಾಯಿದೆಯಡಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಂಗ್ ಹೇಳಿದರು. ಆರ್‌ಪಿಎಫ್ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದ ನಂತರ, ಘಟನೆಗಳು ತೀವ್ರವಾಗಿ ಕಡಿಮೆಯಾಗಿತ್ತು ಭಾನುವಾರದಂದು ಘಟನೆಗಳು ಮರುಕಳಿಸುತ್ತಿವೆಎಂದಿದ್ದಾರೆ.

Post a Comment

0Comments

Post a Comment (0)