ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು...!

ವಾರ್ತಾಜಾಲ
By -
0

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಣ ವರ್ಗಾವಣೆ ಕೇಸ್‌ನಲ್ಲಿ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. 2018ರ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡಿದೆ. 


ಇದೇ ಪ್ರಕರಣದಲ್ಲಿ ಡಿಕೆಶಿ ಜೈಲು ಪಾಲಾಗಿದ್ದದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ಡಿಕೆಶಿ ಪಿತೂರಿ ಆರೋಪ ಹೊರಿಸಿದ್ದ ಇ ಡಿ ಪಿಎಂಎಲ್ ಕಾಯಿದೆಯ ಅಡಿ ಪ್ರಕರಣ ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿರದ ಕಾರಣ ಹೈಕೋರ್ಟಿನ ತೀರ್ಪನ್ನು ರದ್ದುಗೊಳಿಸಲಾಗಿದೆ. ಪಿ.ಎಂ.ಎಲ್. ಕಾಯಿದೆಯ ಅಡಿಯಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಸುಪ್ರೀಂ ಆದೇಶದಿಂದ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ ಎಂದು ವರದಿಗಳು ತಿಳಿಸಿವೆ.

Post a Comment

0Comments

Post a Comment (0)